ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು: ಯು.ಟಿ ಖಾದರ್

Date:

ಮಂಗಳೂರು: ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ. ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು.
ನಾನು ಯಾರ ಹೇಳಿಕೆಗೂ ಕಮೆಂಟ್ ಮಾಡೋದಿಲ್ಲ. ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ. ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಎಲ್ಲರ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...