ಬೆಂಗಳೂರು: ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್ʼಗೆ ಸೇರಲ್ಲ ಎಂದು ಮಾಜಿ ಸಚಿವ ಯೋಗೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತ ಗೊತ್ತಿದೆ ಎಂದು ಹೇಳಿದರು.
ಇನ್ನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದುವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈಗಾಗಲೇ ನಮ್ಮ ಕ್ಷೇತ್ರದ ಜನರು ಹಲವು ಬಾರಿ ಸ್ವತಂತ್ರವಾಗಿ ನಿಂತರೂ ನನ್ನನ್ನು ಗೆಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಲು ಸಾಧ್ಯವಿಲ್ಲ ಎಂದಾದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್ʼಗೆ ಸೇರಲ್ಲ ಎಂದು ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ.