ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

Date:

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ನಾಡಿನ ದೊಡ್ಡ ಹಬ್ಬಗಳಾದ ದಸರಾ, ವಿಜಯದಶಮಿ ಮುಗಿದಿದ್ದು ಇತ್ತ ಬಂಗಾರ, ಬೆಳ್ಳಿ ಬೆಲೆಗಳು ಕೊಂಚ ಇಳಿಕೆ ಕಂಡಿವೆ. ಹಳದಿ, ಸಿಲ್ವರ್​ ಲೋಹಗಳು ಜನರನ್ನ ಆಕರ್ಷಿಸುವ ಜೊತೆಗೆ ಎಲ್ಲರ ಅಚ್ಚುಮೆಚ್ಚಿನ ಸಂಪತ್ತು. ಇವುಗಳನ್ನ ನೋಡಿದರೆ ಸಾಕು ನಾರಿಯರು ಹೇಗಾದರು ಮಾಡಿ ಖರೀದಿಸಲು ಪ್ಲಾನ್ ಮಾಡ್ತಾರೆ.

ಹಾಗಾದ್ರೆ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಹೇಗಿದೆ ಎಂದು ತಿಳಿಯೋಣ..  ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ ಇಳಿಕೆ ಕಂಡಿವೆ. ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 60 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 2 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 10,880 ರೂನಿಂದ 10,820 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 11,804 ರೂಗೆ ತಗ್ಗಿದೆ. 

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,08,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,18,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,08,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,100 ರೂ ಇದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,804 ರೂ
22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,820 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...