ಸ್ವಲ್ಪ ಟೈಮ್ ಕೊಡಿ ಸತ್ಯ ಗೊತ್ತಾಗುತ್ತೆ ಅಂದ ದರ್ಶನ್

Date:

ಮೈಸೂರು: ಎಲ್ಲರ ಮೇಲೂ ಗೂಬೆ ಕೂರಿಸುವುದು ಬೇಡ. ಈ ಪ್ರಕರಣದ ವಿಚಾರಣೆಯಾದ ಬಳಿಕ ನಾನು ಸ್ಪಷ್ಟಿಕರಣ ನೀಡುತ್ತೇನೆ ಎಂದು ಸ್ಯಾಂಡಲ್‍ವುಡ್ ನಟ ದರ್ಶನ್ ಹೇಳಿದ್ದಾರೆ.

ಮೈಸೂರಿನ ಎಸಿಪಿ ಕಚೇರಿಗೆ ತೆರಳಿ ದೂರು ದಾಖಲಿಸಿ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳು ತನಿಖೆ ನಂತರ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಸ್ವಲ್ಪ ಸಮಯ ಕೊಡಿ ನಾನು ಈ ವಿಚಾರವಾಗಿ ಸ್ಪಷ್ಟನೆ ಕೊಡುತ್ತೇನೆ ಎಂದು ಹೇಳಿದ್ದಾರೆ.

ಈ ಘಟನೆ ನಡೆದು ಒಂದು ತಿಂಗಳು ಆಗಿದೆ. ಸತ್ಯ ಏನು ಎನ್ನುವುದು ಹೊರಗೆ ಬರಲಿ. ನಾನು ಆಗ ಈ ಕುರಿತಾಗಿ ಮಾತನಾಡುತ್ತೇನೆ. ಬ್ಲ್ಯಾಕ್ ಮೇಲ್ ಏನೂ ಆಗಿಲ್ಲ. ಪೊರ್ಜರಿಯಾಗಿದೆ. ಈ ಕುರಿತಾಗಿ ಪೊಲೀಸರು ತನಿಖೆ ಮಡುತ್ತಿದ್ದಾರೆ. ಈ ವಿಚಾರಕ್ಕೆ ಬೇರೆ ರಕ್ಕೆ ಪುಕ್ಕಾ ಬಂದಾಗ ನಾನು ತಲೆಯನ್ನು ಕಟ್ಟ್ ಮಾಡುತ್ತೇನೆ ಎಂದು ಹೇಳಿದ್ದಾರೆ.

ತಮ್ಮ ಹೆಸರಿನಲ್ಲಿ ವಂಚನೆಗೆ ಮುಂದಾಗಿದ್ದ ಮಹಿಳೆ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನ ಎಸಿಪಿ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ. 15 ದಿನಗಳ ಹಿಂದೆ ದರ್ಶನ್ ಬಳಿ ಓರ್ವ ಮಹಿಳೆ ಬಂದು, ನಿಮ್ಮ ಹೆಸರಿನಲ್ಲಿ ಶ್ಯೂರಿಟಿ ಹಾಕಿಕೊಂಡು 25 ಕೋಟಿ ರೂ. ಸಾಲ ಪಡೆದುಕೊಳ್ಳುತ್ತಿದ್ದಾರೆ. ದರ್ಶನ್ ಆಪ್ತ ರಾಬರ್ಟ್ ನಿರ್ಮಾಪಕರಾದ ಉಮಾಪತಿ ಮಹಿಳೆಯನ್ನ ದರ್ಶನ್ ಬಳಿ ಕರೆದುಕೊಂಡು ಬಂದಿರುವ ಬಗ್ಗೆ ತಿಳಿದು ಬಂದಿದೆ. ಇನ್ನೂ ತಮ್ಮ ಹೆಸರಿನಲ್ಲಿ ಶ್ಯೂರಿಟಿ ಹಾಕಿದ್ದಾರೆ ಎನ್ನಲಾದ ಎಲ್ಲ ಗೆಳೆಯರನ್ನು ದರ್ಶನ್ ವಿಚಾರಿಸಿದಾಗ ಮಹಿಳೆಯೇ ನಕಲಿ ಬ್ಯಾಂಕ್ ಮ್ಯಾನೇಜರ್ ಎಂಬುವುದು ತಿಳಿದು ಬಂದಿದೆ.

ಏನಿದು ಕೇಸ್? ಈ ಸಂಬಂಧ ದರ್ಶನ್ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಮಹಿಳೆ ನಿರ್ಮಾಪಕ ಉಮಾಪತಿಯೇ ಹೀಗೆ ಹೇಳುವಂತೆ ಹೇಳಿದ್ದರು. ಹಾಗಾಗಿ ಸುಳ್ಳು ಮಾಹಿತಿಯನ್ನು ನೀಡುವಂತೆ ಸೂಚಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಪೊಲೀಸರು ನಿರ್ಮಾಪಕ ಉಮಾಪತಿ, ನಟ ದರ್ಶನ್ ಮತ್ತು ಮಹಿಳೆಯನ್ನು ಎಸಿಪಿ ಕಚೇರಿಗೆ ಬಂದಿದ್ದು, ವಿಚಾರಣೆ ನಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...