ಬೆಳಗಾವಿಯ ನೀರಾವರಿ ನಿಗಮದ ಕಚೇರಿಯಲ್ಲಿ ಇಂದು ಸಚಿವ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ವಿಜಯಪುರ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳ ಸಭೆ ನಡೆಯಿತು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಮತ್ತು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಬಹಳ ದಿನಗಳ ನಂತರ ಒಟ್ಟಿಗೆ ಸಭೆಯೊಂದರಲ್ಲಿ ಕಾಣಿಸಿಕೊಳ್ಲುವ ಮೂಲಕ ಅಚ್ಚರಿಯನ್ನು ಮೂಡಿಸಿದ್ದಲ್ಲದೆ ಸಭೆಯಲ್ಲಿ ಹಾಸ್ಯ ಚಟಾಕಿ ಹಾರಿಸುವ ಮೂಲಕ ಗಂಭೀರವಾಗಿದ್ದ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರು ಮುಗುಳುನಗುವಂತೆ ಮಾಡಿದರು.
ಸಭೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಇಲ್ನೋಡ್ರಪ್ಪ ನಮ್ಮ ಸಾಹುಕಾರರನ್ನು ಸರಿಯಾಗಿ ಕ್ಯಾಮೆರಾದಲ್ಲಿ ತೋರಿಸಿ, ಇವರು ನಮಗೆ ಇವತ್ತು ತುಂಬಾ ಸ್ಪೆಷಲ್’ ಅನ್ನೋ ಮೂಲಕ.. ‘ಸ್ಪಲ್ಪ ನಗಪ್ಪ ಸತೀಶ್ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನು ತಟ್ಟಿದರು’. ಇದರಿಂದಾಗಿ ಸತೀಶ್ ಜಾರಕಿಹೊಳಿ ನಕ್ಕು ಸುಮ್ಮನಾದರು.
ಇಂದು ನಡೆದ ಸಭೆಯಲ್ಲಿ ಉತ್ತರ ಕರ್ನಾಟಕದ ಜನ-ಜಾನುವಾರುಗಳ ಕುಡಿಯುವ ನೀರಿನ ಬವಣೆ ತಪ್ಪಿಸಲು ಪಕ್ಕದ ರಾಜ್ಯ ಮಹಾರಾಷ್ಟ್ರದ ಕೊಯ್ನಾದಿಂದ ಕರ್ನಾಟಕದ ಕೃಷ್ಣಾ ಮತ್ತು ಭೀಮಾ ನದಿಗೆ ನೀರು ಬಿಡುಗಡೆ ಮಾಡುವ ವಿಚಾರವಾಗಿ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.