ಸ್ವಿಮ್ಮಿಂಗ್ ವೇಳೆ ಅವಘಡ: ನೀರಲ್ಲಿ ಮುಳುಗಿ ಯುವಕ ಸಾವು!

Date:

ಸ್ವಿಮ್ಮಿಂಗ್ ವೇಳೆ ಅವಘಡ: ನೀರಲ್ಲಿ ಮುಳುಗಿ ಯುವಕ ಸಾವು!

ಕಾನ್ಪುರ:- ಯುವಕನೊಬ್ಬನು ಈಜುಕೊಳದಲ್ಲಿ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶ ಕಾನ್ಪುರದಲ್ಲಿ ಜರುಗಿದೆ. ಮೃತ ಯುವಕನನ್ನು 24 ವರ್ಷದ ಶಿಖರ್ ಸಿಂಗ್ ಎಂದು ಗುರುತಿಸಲಾಗಿದೆ. ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಈ ದೃಶ್ಯವು ಸೆರೆಯಾಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

@DeepikaBhardwaj ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಯುವಕರು ಈಜುಕೊಳದಲ್ಲಿ ಈಜುತ್ತಿರುವುದನ್ನು ಕಾಣಬಹುದು. ಈ ವೇಳೆಯಲ್ಲಿ ಯುವಕನೊಬ್ಬನು ನೀರಿನಲ್ಲಿ ಮುಳುಗುತ್ತಿದ್ದು, ಡಿಜೆಯ ಸೌಂಡ್ ನಿಂದಾಗಿ ಅಲ್ಲೇ ಇದ್ದ ಸ್ನೇಹಿತರಿಗೆ ಈ ಬಗ್ಗೆ ತಿಳಿಯುವುದೇ ಇಲ್ಲ. ಹೀಗಾಗಿ ಸಹಾಯಕ್ಕೆ ಯಾರು ಬಾರದ ಹಿನ್ನೆಲೆ ಯುವಕ ಸಾವನ್ನಪ್ಪಿದ್ದಾನೆ.

ಸ್ನೇಹಿತರಿಗೆ ಈ ಬಗ್ಗೆ ತಿಳಿಯುತ್ತಿದ್ದಂತೆ ಯುವಕನನ್ನು ನೀರಿನಿಂದ ಹೊರ ತೆಗೆದಿದ್ದಾರೆ. ಆದಾಗಲೇ ಆತನ ಪ್ರಾಣ ಪಕ್ಷಿ ಹಾರಿ ಹೋಗಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಚಾಕೇರಿ ಪೊಲೀಸ್ ಠಾಣಾ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...