ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

tnit editors
1 Min Read

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಾಸನ: ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಯುವಕನನ್ನು ಕರೆದುಕೊಂಡು ಹೋಗಿ ಬರ್ಬರವಾಗಿ ಹತ್ಯೆಗೈದ ಘಟನೆ Arasikere ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
22 ವರ್ಷದ ವರುಣ್ ಕೆ.ಎಂ ಮೃತ ಯುವಕನಾಗಿದ್ದು, ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ದುಷ್ಕರ್ಮಿಗಳು ಹತ್ಯೆ ನಡೆಸಿದ್ದಾರೆ. ಬಳಿಕ, ಶವದ ಯಾವುದೇ ಗುರುತು ಸಿಗದಂತೆ ಸಂಪೂರ್ಣವಾಗಿ ಸುಟ್ಟು ಸಾಕ್ಷ್ಯ ನಾಶ ಮಾಡಲು ಯತ್ನಿಸಿದ್ದಾರೆ.
ಮಾರ್ಚ್ 15ರಂದು ಗಂಡಸಿ ಪೊಲೀಸ್ ಠಾಣೆಯಲ್ಲಿ ವರುಣ್ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ, ಮೃತನ ಸ್ನೇಹಿತ ನೀಡಿದ ಮಾಹಿತಿಯ ಆಧಾರದ ಮೇಲೆ ಪ್ರಕರಣಕ್ಕೆ ಮಹತ್ವದ ಸುಳಿವು ಸಿಕ್ಕಿದೆ. ಸದ್ಯ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.

Share This Article