No menu items!
12.4 C
Munich
Saturday, May 30, 2026

ಹಣ ಅಕ್ರಮ ವರ್ಗಾವಣೆ ಕೇಸ್‌: ಟಾಲಿವುಡ್‌ ಖ್ಯಾತ ನಟ ಮಹೇಶ್‌ ಬಾಬುಗೆ ಇ.ಡಿ. ನೋಟಿಸ್‌..!

Must read

ಹಣ ಅಕ್ರಮ ವರ್ಗಾವಣೆ ಕೇಸ್‌: ಟಾಲಿವುಡ್‌ ಖ್ಯಾತ ನಟ ಮಹೇಶ್‌ ಬಾಬುಗೆ ಇ.ಡಿ. ನೋಟಿಸ್‌..!

ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಮಹೇಶ್‌ ಬಾಬುಗೆ ಜಾರಿ ನಿರ್ದೇಶನಾಲಯ ನೋಟಿಸ್‌ ಜಾರಿ ಮಾಡಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಏಪ್ರಿಲ್ 16ರಂದು ಇಡಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಶೋಧ ನಡೆಸಿದ್ದರು. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಕಚೇರಿಗಳು ಹಾಗೂ ಈ ಕಂಪನಿಗಳ ಮುಖ್ಯಸ್ಥರ ಮನೆಗಳ ಮೇಲೆ ದಾಳಿ ನಡೆಸಿತ್ತು.
ಅದಾದ ನಂತರ ಈ ಬೆಳವಣಿಗೆ ನಡೆದಿದೆ. ಏಪ್ರಿಲ್ 28ರ ಬೆಳಿಗ್ಗೆ 10:30ಕ್ಕೆ ಮಹೇಶ್ ಬಾಬು ಹೈದರಾಬಾದ್ನಲ್ಲಿ ವಿಚಾರಣೆಗೆ ಹಾರಜಿ ಹಾಕಬೇಕಿದೆ. ಮಹೇಶ್ ಬಾಬು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಸಾಯಿಸೂರ್ಯ ಡೆವಲಪರ್ಸ್ ಜಾಹೀರಾತಿನಲ್ಲಿ ನಟಿಸಿದ್ದರು. ಮಹೇಶ್ ಬಾಬು ಪ್ರಸ್ತುತ ರಾಜಮೌಳಿ ಅವರ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ವೇಗವಾಗಿ ನಡೆಯುತ್ತಿದೆ. ಇದರ ಮಧ್ಯೆ ಅವರಿಗೆ ತೊಂದರೆ ಎದುರಾಗಿದೆ.
ಸುರಾನ್ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ನಲ್ಲಿ ಸಾಕಷ್ಟು ಅಕ್ರಮಗಳು ನಡೆದಿರೋದು ಬೆಳಕಿಗೆ ಬಂದಿದೆ. ರಿಯಲ್ ಎಸ್ಟೇಟ್ ಡೀಲಿಂಗ್ ವೇಳೆ ಈ ಅಕ್ರಮ ಎಸೆಗಲಾಗಿದೆ. ಇದರಲ್ಲಿ ಮಹೇಶ್ ಬಾಬು ಅವರ ಶಾಮೀಲಾಗಿದ್ದಾರಾ ಎಂಬ ಬಗ್ಗೆ ತನಿಖೆ ನಡೆಯಲಿದೆ. ಮಹೇಶ್ ಬಾಬು ಅವರು ಇದರ ಪ್ರಚಾರ ಮಾಡಿದ್ದರಿಂದ ಅನೇಕರು ಇದರಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿರುವ ಸಾಧ್ಯತೆ ಇರುತ್ತದೆ. ಸದ್ಯ ಮಹೇಶ್ ಬಾಬು ಅವರ ಶಾಮೀಲು ನೇರವಾಗಿ ಇಲ್ಲದೆ ಇದ್ದರು, ಅವರು ಪಡೆದ ಜಾಹೀರಾತಿನ ಹಣದ ಬಗ್ಗೆ ತನಿಖೆ ನಡೆಯಲಿದೆ.

- Advertisement -spot_img

More articles

- Advertisement -spot_img

Latest article