ಹರಿಯಾಣ ವಿಧಾನಸಭಾ ಚುನಾವಣೆ ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ: ಡಿ.ಕೆ.ಸುರೇಶ್
ಬೆಂಗಳೂರು: ಹರಿಯಾಣ ವಿಧಾನಸಭಾ ಚುನಾವಣೆ ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರಿಯಾಣ ವಿಧಾನಸಭಾ ಚುನಾವಣೆ ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ.
ಹೈಕಮಾಂಡ್ ಸೋಲಿನ ಬಗ್ಗೆ ಪರಾಮರ್ಶೆ ಮಾಡುತ್ತದೆ. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಎನ್ನುವುದಕ್ಕೆ ಇದು ಸಾಕ್ಷಿ ಹಾಗೂ ಉತ್ತಮ ನಿದರ್ಶನ. ಜಮ್ಮು, ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ ಎಂದರು.
ಇನ್ನೂ ಸಚಿವರಾದ ಮಹದೇವಪ್ಪ, ಪರಮೇಶ್ವರ್ ಭೇಟಿ ವಿಚಾರದ ಬಗ್ಗೆ ಮಾತನಾಡಿ, ಮಹದೇವಪ್ಪ ಹಿರಿಯ ಸಚಿವರು. ಪರಮೇಶ್ವರ್ ಪ್ರಮುಖ ಖಾತೆ ಹೊಂದಿರುವವರು, ಇವರುಗಳು ರಾಜಕೀಯ ಹೊರತಾಗಿ ಸೇರಿದ್ದಾರೆ. ಈಗಾಗಲೇ ಸರ್ಕಾರದ 136 ಶಾಸಕರು ಸಿದ್ದರಾಮಯ್ಯರ ಬೆನ್ನಿಗಿದ್ದಾರೆ ಎನ್ನುವ ಸಂದೇಶವನ್ನು ನಾವು ಕೊಟ್ಟಿದ್ದೇವೆ ಎಂದು ಹೇಳಿದರು.