ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪ್ರಕರಣ: ಓರ್ವನ ಬಂಧನ
ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಸಂಬಂಧ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಸೈಯದ್ ನಸ್ರು (30) ಬಂಧಿತ ಆರೋಪಿಯಾಗಿದ್ದು,
ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.