ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು
2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ವ್ಯಾಪ್ತಿಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವು ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಪ್ರಕರಣದ ಏಳು ಮಂದಿ ಆರೋಪಿಗಳನ್ನು ಹಾವೇರಿ ಜಿಲ್ಲೆಯ ವ್ಯಾಪ್ತಿಯಿಂದ ಗಡಿಪಾರು ಮಾಡಲಾಗಿದೆ.
ಈ ಕುರಿತು ಹಾವೇರಿ ಜಿಲ್ಲೆಯ ಸವಣೂರು ಉಪವಿಭಾಗಾಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿದ್ದು, ಆರೋಪಿಗಳನ್ನು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡುವಂತೆ ಸೂಚಿಸಲಾಗಿದೆ.
ಗಡಿಪಾರುಗೊಂಡ ಆರೋಪಿಗಳ ವಿವರ ಹೀಗಿದೆ: ಅಪ್ತಾಬ್ ಚಂದನಕಟ್ಟಿ, ಶೋಯಿಬ್ ಮುಲ್ಲಾ, ಮದರ್ ಸಾಬ್ ಮಂಡಕ್ಕಿ, ಮೊಹ್ಮದ್ ಸಾದಿಕ್ ಅಗಸಿಮನಿ, ರಿಯಾಜ್ ಸಾವಿಕೇರಿ, ಸಮಿವುಲ್ಲಾ ಲಾಲನವರ ಹಾಗೂ ತೌಸಿಪ್ ಅಹ್ಮದ್ ಚೌಟಿರ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ಮುಂದಿನ ಆದೇಶದವರೆಗೆ ಆರೋಪಿಗಳು ಹಾವೇರಿ ಜಿಲ್ಲೆಯ ವ್ಯಾಪ್ತಿಗೆ ಪ್ರವೇಶಿಸದಂತೆ ಸೂಚಿಸಲಾಗಿದೆ.






