ಬೆಂಗಳೂರು: ರಾಜ್ಯದ ಜನರಿಗೆ ಮತ್ತೆ ಬೆಲೆ ಏರಿಕೆ ಬಿಸಿತಟ್ಟಿದೆ. ಎಲ್ಲಾ ಬೆಲೆಗಳು ಗಗನಕ್ಕೇರಿರುವಾಗಲೇ ಸರ್ಕಾರ ಹಾಲಿನ ದರ ಕೂಡ ಹೆಚ್ಚಳ ಮಾಡಿದ್ದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಪ್ರತಿ ಲೀಟರ್ ಹಾಲಿನ ದರ 2.10 ರೂ. ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದ್ರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್ (1 ಲೀಟರ್) ಪ್ಯಾಕೆಟ್ ಹಾಲು ಇನ್ಮುಂದೆ 1,050 ಎಂಎಲ್ ಹಾಗೂ ಅರ್ಧ ಲೀಟರ್ ಪ್ಯಾಕೆಟ್ ಹಾಲು 550 ಎಂಎಲ್ ಹೆಚ್ಚುವರಿ ಸಿಗಲಿದೆ. ಪರಿಷ್ಕೃತ ದರ ನಾಳೆಯಿಂದ (ಜೂ.26) ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.
ಹಾಲಿನ ಹೊಸ ದರ ಹೇಗಿದೆ.?
ನೀಲಿ ಪ್ಯಾಕೆಟ್ ಹಾಲು 42 ರಿಂದ 44 ರೂ
ನೀಲಿ ಪ್ಯಾಕೆಟ್ (ಟೋನ್ಡ್ ಹಾಲು) 43 ರಿಂದ 45ರೂ
ಆರೆಂಜ್ ಪ್ಯಾಕೆಟ್ ಹಾಲು 46ರಿಂದ 48 ರೂ
ಆರೆಂಜ್ ಸ್ಪೆಷಲ್ ಹಾಲು 48 ರಿಂದ 50 ರೂ
ಶುಭಂ ಹಾಲು 48ರಿಂದ 50 ರೂ
ಸಮೃದ್ದಿ ಹಾಲು 51ರಿಂದ 53ರೂ
ಶುಭಂ (ಟೋನ್ಡ್ ಹಾಲು) 49ರಿಂದ 51ರೂ
ಸಂತೃಪ್ತಿ ಹಾಲು 55 ರಿಂದ 57 ರೂ
ಶುಭಂ ಗೋಲ್ಡ್ ಹಾಲು 49ರಿಂದ 51ರೂ
ಶುಭಂ ಡಬಲ್ ಟೋನ್ಡ್ ಹಾಲು 41 ರಿಂದ 43 ರೂ ಗೆ ಏರಿಕೆ