ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಹೀನಾಯ ಸೋಲು !

Date:

ಹಾಸನ: ಲೋಕಸಭೆ ಚುನಾವಣೆಯ ನಡುವೆ ಭಾರತ ಮಾತ್ರವಲ್ಲದೇ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡಿದ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್‌ ಪ್ರಕರಣದ ನಡುವೆಯೇ ಅಲ್ಲಿನ ಫಲಿತಾಂಶ ಏನಾಗಬಹುದು ಎನ್ನುವ ಕುತೂಹಲ ಇದ್ದೇ ಇತ್ತು. ಇದೀಗ ಕುತೂಹಲಕ್ಕೆ ತೆರೆ ಬಿದ್ದಿದೆ.
ಹೌದು ತೀವ್ರ ಕೂತುಹಲ ಮೂಡಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಮೊಮ್ಮಗ, ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಹೀನಾಯವಾಗಿ ಸೋಲು ಅನುಭವಿಸಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಮಾಜಿ ಸಚಿವ, ದಿವಂಗತ ಜಿ. ಪುಟ್ಟಸ್ವಾಮಿಗೌಡರ ಮೊಮ್ಮಗ, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಹಾಸನದಲ್ಲಿ 25 ವರ್ಷಗಳ ನಂತರ ಕಾಂಗ್ರೆಸ್ ಗೆಲುವು ಸಾಧಿಸಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...