No menu items!
29.6 C
Munich
Thursday, June 18, 2026

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಸಾವು..!

Must read

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಸಾವು..!

 

ಹಾಸನ: ಹಾಸನ ಜಿಲ್ಲೆಯಲ್ಲಿ ಇತ್ತೀಚಿಗೆ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಳೆದ ಒಂದು ತಿಂಗಳಲ್ಲಿ ಹೃದಯಾಘಾತದಿಂದ ಜಿಲ್ಲೆಯಲ್ಲಿ ಸಾಕಷ್ಟು ಜನರು ಸಾವನ್ನಪ್ಪಿರುವ ಆಘಾತಕಾರಿ ಘಟನೆಗಳು ವರದಿಯಾಗಿವೆ.

ಇದೀಗ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಸಾವು ಸಂಭವಿಸಿದೆ. ಲೇಪಾಕ್ಷಿ (50) ಸಾವನ್ನಪ್ಪಿದ ದುರ್ಧೈವಿಯಾಗಿದ್ದು, ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಜೆಪಿ ನಗರದಲ್ಲಿ ಘಟನೆ ನಡೆದಿದೆ.

ಬೆಳಿಗ್ಗೆ ಮನೆಯಲ್ಲಿದ್ದಾಗ ದಿಡೀರ್ ಸುಸ್ತು ಎಂದು ಮಹಿಳೆ ಕುಸಿದು ಬಿದ್ದಿದ್ದಾಳೆ. ಪತಿ ನಾಗರಾಜ್ ಕೂಡಲೇ ಲೇಪಾಕ್ಷಿ ಅವರನ್ನು ಬೇಲೂರಿನ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದ ಬಗ್ಗೆ ವೈದ್ಯರು ಧೃಡಪಡಿಸಿದ್ದಾರೆ.

- Advertisement -spot_img

More articles

- Advertisement -spot_img

Latest article