No menu items!
16.8 C
Munich
Friday, August 21, 2026

ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

Must read

14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆ ಇಂದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಹೊಳೆನರಸೀಪುರದ ರಾಘವೇಂದ್ರಸ್ವಾಮಿ, ಆಂಜನೇಯಸ್ವಾಮಿ, ಮಾವಿನಕೆರೆ ರಂಗನಾಥಸ್ವಾಮಿ ಲಕ್ಷ್ಮಿನರಸಿಂಹ ಸೇರಿದಂತೆ ವಿವಿಧ ದೇಗುಲಗಳಲ್ಲಿ ಪ್ರಜ್ವಲ್ ರೇವಣ್ಣ ಅವರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಡಿಸಿ ಕಚೇರಿಗೆ ಆಗಮಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಕೆ ವೇಳೆ ಶಾಸಕ ಮಾಜಿ ಸಚಿವ ಹೆಚ್.ಡಿ ರೇವಣ್ಣ ಶಾಸಕರಾದ ಎ.ಮಂಜು ಸಿ.ಎನ್ ಬಾಲಕೃಷ್ಣ ಸ್ವರೂಪ್ ಭಾಗಿಯಾಗಿದ್ದರು.

- Advertisement -spot_img

More articles

- Advertisement -spot_img

Latest article