ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಎ. ಮಂಜು ಮನವಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಸುಳ್ಳು ಪ್ರಮಾಣ ಪತ್ರ ನೀಡಿ ಆಯ್ಕೆಯಾಗಿದ್ದಾರೆ ಎಂದು ಅವರ ವಿರುದ್ಧ ಮಂಜು ಹೈಕೋರ್ಟ್ ನಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿಯನ್ನು ಪ್ರಜ್ವಲ್ ರೇವಣ್ಣ ಘೋಷಿಸಿಕೊಂಡಿದ್ದಾರೆ. ಅಲ್ಲದೆ, ಪ್ರಮಾಣಪತ್ರದಲ್ಲಿ ಹಲವು ತಪ್ಪು ಮಾಹಿತಿ ನೀಡಿದ್ದಾರೆ ಎಂದು ದೂರಿದ್ದಾರೆ. ಆದಾಯ, ಸಂಪಾದನೆ ಇಲ್ಲ ಎಂದು ಘೋಷಿಸಿಕೊಂಡು ಸಾಲ ಕೊಟ್ಟಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಸರ್ಕಾರಿ ಆಸ್ತಿಯನ್ನು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ
ಆಸ್ತಿಗಳ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ಎ. ಮಂಜು ದೂರಿದ್ದಾರೆ.ಮುಂದಿನ ಒಂದೆರಡು ವಾರಗಳಲ್ಲಿ ನ್ಯಾಯಪೀಠದ ಮುಂದೆ ತಕರಾರು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.