ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ

By
1 Min Read

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಈಗ ಜೆಡಿಎಸ್ ಪಕ್ಷದಿಂದ ಉಚ್ಛಾಟನೆಯಾಗಿದ್ದಾರೆ. ಹೌದು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಪೆನ್ ಡ್ರೈವ್ ಪ್ರಕರಣ ತನಿಖೆಯನ್ನು ಎಸ್ಐಟಿ ತಂಡ ಆರಂಭಿಸಿದೆ. ಈ ನಡುವೆ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ತಲೆದಂಡ ಮಾಡುವಂತೆ ಜೆಡಿಎಸ್ ಶಾಸಕರು, ಹೈಕಮಾಂಡ್ ನಾಯಕರಿಗೆ ಒತ್ತಾಯ ಮಾಡಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣನನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಈಗ ಜೆಡಿಎಸ್ ಪಕ್ಷದಿಂದ ಉಚ್ಛಾಟನೆಯಾಗಿದ್ದಾರೆ. ಆದರೆ ಹಾಸನ ಲೋಕಸಭಾ ಚುನಾವಣೆಗೆ ಈಗಾಗಲೇ ಮತದಾನ ಮುಗಿದಿದೆ.
ಜೂನ್ 4 ರಂದು ಹಾಸನ ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಇದೀಗ ಪ್ರಜ್ವಲ್ ರೇವಣ್ಣ ಅವರು ಜೆಡಿಎಸ್ ಪಕ್ಷದಿಂದ ಉಚ್ಛಾಟನೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಗೆದ್ದರೆ ಸಂಸದ ಸ್ಥಾನದಲ್ಲಿ ಮುಂದುವರಿಯುತ್ತಾರಾ ಅನ್ನೋದು ಕುತೂಹಲ ಕೆರಳಿಸಿದೆ.

Share This Article