No menu items!
17.8 C
Munich
Friday, July 3, 2026

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್‌ ಪಕ್ಷದಿಂದ ಅಮಾನತು

Must read

ಹುಬ್ಬಳ್ಳಿ: ಹಾಸನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಸದ ಪ್ರಜ್ವಲ್‌ ರೇವಣ್ಣ ಅಮಾನತಿಗೆ ಶಿಫಾರಸು ಮಾಡಲಾಗಿದೆ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ ಹೇಳಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯಲ್ಲಿ ಕೋರ್‌ ಕಮಿಟಿ ಸಭೆ ನಡೆಸಲಾಗಿತ್ತು. ಇದಾದ ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ಸಣ್ಣ, ಪುಟ್ಟ ಏನೆ ತೊಂದರೆ ಬಂದ್ರೂ ಅದನ್ನು ನಿವಾರಣೆ ಮಾಡಿಕೊಂಡು ಬೂತ್ ಮಟ್ಟದ ಕಾರ್ಯಕರ್ತರಲ್ಲಿ ಒಗ್ಗಟ್ಟು ತಂದು ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಇಂದು ಕೋರ್ ಕಮೀಟಿ ಮಿಟಿಂಗ್ ಆಗಿದೆ ಎಂದರು. ಪ್ರಜ್ವಲ್ ಮೇಲಿನ ಎಸ್ ಐ ಟಿ ತನಿಖೆಯನ್ನು ಸ್ವಾಗತ ಮಾಡಿದ್ದೇವೆ. ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಕಮಿಟಿಯಲ್ಲಿ ತೀರ್ಮಾನವಾಗಿದೆ. ಪಕ್ಷದಿಂದ ಅಮಾನತು ಮಾಡಲು ದೇವೆಗೌಡರಿಗೆ ಶಿಫಾರಸು ಮಾಡಲಾಗಿದೆ ಎಂದರು.

- Advertisement -spot_img

More articles

- Advertisement -spot_img

Latest article