ಬೆಂಗಳೂರು: ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾಲಹಳ್ಳಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲ್ ಮೃತ ದುರ್ದೈವಿಯಾಗಿದ್ದು, ಮೃತ ಯುವತಿ ನಗರದ ನರ್ಸಿಂಗ್ ಕಾಲೇಜ್ ಒಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಮೂರು ದಿನಗಳ ಹಿಂದೆ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲಿಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಕಲಹದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸ್ಟೆಲ್ʼನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!
Date: