ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಧರ್ಮದ ಯುವಕ ತಾನು ಹಿಂದೂ ಯುವಕ ಎಂದು ನಂಬಿಸಿ ಯುವತಿಯೋರ್ವಳಿಗೆ ಲವ್ ಜಿಹಾದ್ ಹೆಸರಿನಲ್ಲಿ ಮೋಸ ಮಾಡಿದ್ದಾನೆ ಎಂದು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಪೀಡಿಸಿ ಇದೀಗ ಇಬ್ಬರ ಜೊತೆಗಿನ ಫೋಟೋಗಳನ್ನು ತೋರಿಸಿ ಮತಾಂತರವಾಗದಿದ್ದಲ್ಲಿ ಅತ್ಯಾಚಾರವೆಸಗುವುದಾಗಿ ಬೆದರಿಕೆಯೊಡ್ದಿದ್ದು ಯುವತಿಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿ ಕಿರುಕುಳ ನೀಡುತ್ತಿರುತ್ತಿರುವುದಾಗಿ ಯುವತಿ ದೂರಿದ್ದಾಳೆ.
ಇಬ್ರಾಹಿಮ್ ಎಂಬ ಮುಸ್ಲಿಂ ಯುವಕ ತನ್ನ ಧರ್ಮವನ್ನು ಮರೆಸಿ ಹಿಂದೂ ಎಂದು ಹೇಳಿ ಯುವತಿಯನ್ನು ನಂಬಿಸಿ ಫೋಟೋ ತೆಗೆಸಿ ಲವ್ ಜಿಹಾದ್ ಮಾಡಲು ಮುಂದಾಗಿದ್ದ ಎಂದು ಹೇಳಲಾಗಿದೆ.
ವಿಷಯ ತಿಳಿದ ಶ್ರೀ ರಾಮ್ ಸೇನೆ ಹಾಗೂ ಸ್ಥಳೀಯರು ಸೇರಿ ಯುವತಿಗೆ ನ್ಯಾಯ ಕೊಡಿಸುವ ಸಲುವಾಗಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಇಬ್ರಾಹಿಮ್ ವಿರುದ್ಧ ದೂರು ದಾಖಲಿಸಿದ್ದಾರೆ.
ಸುರತ್ಕಲ್ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.