ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡುವುದು ಕಾಂಗ್ರೆಸ್ಸಿಗೆ ಅಭ್ಯಾಸವಾಗಿದೆ: ಎನ್.ರವಿಕುಮಾರ್
ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡುವುದು ಕಾಂಗ್ರೆಸ್ಸಿಗೆ ಅಭ್ಯಾಸವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಅಮಿತ್ ಶಾ ಅವರ ವಿರುದ್ಧ ವ್ಯಂಗ್ಯವಾಗಿ ಟೀಕಿಸಿದ್ದನ್ನು ಖಂಡಿಸಿದ ಅವರು, ಹಿಂದೂ ಧರ್ಮ ಎಂದೊಡನೆ ಇಷ್ಟೊಂದು ಕನಿಷ್ಠವಾಗಿ ಮಾತನಾಡುವುದು ಸರಿಯಲ್ಲ.
ಅಮಿತ್ ಶಾ ಅವರು ಮಹಾಕುಂಭಮೇಳಕ್ಕೆ ಹೋಗಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಮೆಕ್ಕಾ, ಮದೀನಾಕ್ಕೆ ಹೋದರೆ ಸ್ವರ್ಗ ಸಿಗುತ್ತದೆಯೇ? ಬಡತನ ಹೋಗುತ್ತದೆಯೇ ಎಂದು ಹೇಳುವ ಧೈರ್ಯ ಅವರಿಗೆ ಇದೆಯಾ?
ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡುವುದು ಕಾಂಗ್ರೆಸ್ಸಿಗೆ ಅಭ್ಯಾಸ, ಹವ್ಯಾಸವಾಗಿದೆ. ಮಲ್ಲಿಕಾರ್ಜುನ ಖರ್ಗೆಯವರು ಕೂಡಲೇ ಕ್ಷಮೆ ಯಾಚಿಸಬೇಕು. ಕಾಂಗ್ರೆಸ್ಸಿನ ಅಖಿಲ ಭಾರತ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.