ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ
ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ (87)ಅವರು ಇಂದು ನಿಧನರಾಗಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ.
ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಈಗ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. 90ರ ದಶಕದ ಬಳಿಕ ಸರೋಜಾ ದೇವಿ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರಲಿಲ್ಲ. ಪುನೀತ್ ನಟನೆಯ 2019ರ ‘ನಟಸಾರ್ವಭೌಮ’ ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡಿದರು. ಸರೋಜಾ ದೇವಿ ಆಗಿಯೇ ಅವರು ಸಿನಿಮಾದಲ್ಲಿ ಕಾಣಿಸಿಕೊಂಡರು.