No menu items!
12.1 C
Munich
Saturday, September 12, 2026

ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

Must read

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.

ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

- Advertisement -spot_img

More articles

- Advertisement -spot_img

Latest article