ಹಿರಿಯ ನಟ ಬಿ.ಜಯಾ ಇನ್ನಿಲ್ಲ

Date:

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನರಾಗಿದ್ದಾರೆ. ಅವರು ಒಂದು ತಿಂಗಳ ಹಿಂದೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದರು ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ, ಕೊನೆಯುಸಿರೆಳೆದಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಸುಮಾರು 6 ದಶಕಗಳಿಗೂ ಅಧಿಕ ಸಮಯ ಕನ್ನಡ ಚಿತ್ರರಂಗದಲ್ಲಿ ಪೋಷಕ ನಟಿಯಾಗಿ ಜಯಾ ಗುರುತಿಸಿಕೊಂಡಿದ್ದರು.

ಅದರಲ್ಲೂ ಮುಖ್ಯವಾಗಿ ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಹಾಸ್ಯನಟಿ ಎಂದು ಜಯಾ ಜನಪ್ರಿಯರಾಗಿದ್ದರು. ಮೂರು ತಲೆಮಾರಿನ ನಟ, ನಟಿಯರೊಂದಿಗೆ ಅಭಿನಯಿಸಿರುವ ಹೆಗ್ಗಳಿಕೆ ಅವರದು. ಹಾಸ್ಯ ದಿಗ್ಗಜರಾದ ನರಸಿಂಹರಾಜು, ದ್ವಾರಕೀಶ್ ಮುಂತಾದವರೊಂದಿಗೆ ಜಯಾ ನಟಿಸಿದ ಹಾಸ್ಯ ದೃಶ್ಯಗಳು ಇಂದಿಗೂ ಜನಪ್ರಿಯ. 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು ರಂಗಭೂಮಿ, ಕಿರುತೆರೆಯಲ್ಲೂ ಅವರು ಬಹಳ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಚಿತ್ರರಂಗ ಮತ್ತು ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.


1958ರಲ್ಲಿ ತೆರೆಕಂಡ ‘ಭಕ್ತ ಪ್ರಹ್ಲಾದ’ ಸಿನಿಮಾ ಜಯಾ ಅವರು ಚೊಚ್ಚಲ ಸಿನಿಮಾ. ಡಾ. ರಾಜ್‌ಕುಮಾರ್ ಅವರ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಕೀರ್ತಿ ಅವರದ್ದು. ಆಗಿನ ಡಾ.ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಸೇರಿದಂತೆ ಈಗಿನ ಯುವ ಪೀಳಿಗೆಯ ನಟರೊಂದಿಗೂ ಜಯಾ ನಟಿಸಿರುವುದು ವಿಶೇಷ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...