ಹಿರಿಯ ವಯಸ್ಸಿನ ಮಹಿಳೆ ಮೇಲೆ ರೇಪ್: ಚಾರ್ಜ್ ಶೀಟ್ ನಲ್ಲಿ ಪ್ರಜ್ವಲ್ ಕ್ರೌರ್ಯ ಉಲ್ಲೇಖ
ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ತನಿಖೆ ನಡೆಸಿದ ವಿಶೇಷ ತನಿಖಾ ತಂಡ ಎರಡನೇ ಚಾರ್ಜ್ ಶೀಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ. 60 ವರ್ಷದ ಮಹಿಳೆಗೆ ಪ್ರಜ್ವಲ್ನಿಂದ ಲೈಂಗಿಕ ದೌರ್ಜನ್ಯ ಎಸಗಿರುವುದು ಸತ್ಯ ಎಂದು ಚಾರ್ಜ್ ಶೀಟ್ನಲ್ಲಿ ಉಲ್ಲೇಖ ಮಾಡಲಾಗಿದೆ.
ಹೊಳೆನರಸೀಪುರದಲ್ಲಿ 60 ವರ್ಷದ ಮನೆಕೆಲಸದಾಕೆಯ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎಂದು ಚಾರ್ಜ್ಶೀಟ್ನಲ್ಲಿ ಎಸ್ಐಟಿ ಅಧಿಕಾರಿಗಳು ಉಲ್ಲೇಖ ಮಾಡಿದ್ದಾರೆ. ಸಂತ್ರಸ್ತೆಯನ್ನ ಹೆದರಿಸಿ ಹಲವು ಬಾರಿ ದೌರ್ಜನ್ಯ ಎಸಗಿರುವುದು ತನಿಖೆಯಲ್ಲಿ ಧೃಡವಾಗಿದೆ.
ಕೃತ್ಯ ಎಸಗುವಾಗ ಮೊಬೈಲ್ ಮೂಲಕ ಪ್ರಜ್ವಲ್ ರೇವಣ್ಣ ಮೊಬೈಲ್ನಲ್ಲಿ ವಿಡಿಯೋ ಚಿತ್ರಿಕರಿಸಿದ್ದರು. ಸಂತ್ರಸ್ತೆ ಕೈಮುಗಿದು ನಿಮ್ಮ ತಾತ ಹಾಗೂ ತಂದೆಗೆ ಊಟ ಬಡಿಸಿದ್ದೇನೆ, ನನ್ನ ಬಿಟ್ಟು ಬಿಡು ಎಂದು ಸಂತ್ರಸ್ತೆ ಅಂಗಲಾಚಿದರೂ ಬಿಡದ ಪ್ರಜ್ವಲ್ ರೇವಣ್ಣ ದೌರ್ಜನ್ಯ ಎಸಗಿದ್ದಾರೆ ಎಂದು ಎಸ್ಐಟಿ ಉಲ್ಲೇಖಿಸಿದೆ.