ಹೀನಾಯ ಸೋಲಿನ ನಂತರ ಮರು ಚುನಾವಣೆಗೆ MES ಪಟ್ಟು

1
39

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಎಂಇಎಸ್ ಸಂಘಟನೆ ಹೀನಾಯ ಸೋಲು ಕಂಡಿದೆ. ಪಾಲಿಕೆ ಚುನಾವಣೆಯ ಸೋಲಿನ ಬೆನ್ನಲ್ಲೇ ಎಂಇಎಸ್ ಹೊಸ ಕ್ಯಾತೆ ತೆಗೆದಿದೆ.

ಇತ್ತೀಚಿನ ದಿನಗಳಲ್ಲಿ ಬಹುತೇಕ ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಪರಾಜಯ ಅನುಭವಿಸುತ್ತಿದ್ದಂತೆ ಮಾಡುವ ಆರೋಪದಂತೆ, ಚುನಾವಣಾ ಪ್ರಕ್ರಿಯೆ ಕಾನೂನು ಬಾಹಿರವಾಗಿದೆ, ವಿವಿ ಪ್ಯಾಟ್ ಬಳಸದೆ ಚುನಾವಣೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪ ಮಾಡಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿ ಜಿಲ್ಲಾಧಿಕಾರಿ ನಿವಾಸಕ್ಕೆ ತೆರಳಿದ್ದ ಎಂಇಎಸ್ ಕಾರ್ಯಕರ್ತರು ಅಲ್ಲಿ ಹೈಡ್ರಾಮಾ ಮಾಡಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆ ಕಾನೂನು ಬಾಹಿರವಾಗಿದೆ. ವಿವಿ ಪ್ಯಾಟ್ ಬಳಸದೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನಿವಾಸದ ಮುಂದೆ‌ ಎಂಇಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿನ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನಿವಾಸದಲ್ಲಿ ಎಂಇಎಸ್ ಪುಂಡರು ಗಲಾಟೆ ಮಾಡಿದ್ದು, ಬೆಳಗಾವಿ ಮಹಾನಗರ ಪಾಲಿಕೆಗೆ ಮರುಚುನಾವಣೆ ಮಾಡುವಂತೆ ಮನವಿ ಮಾಡಿದ್ದಾರೆ.

ಪಾಳಿಕೆ ಚುನಾವಣೆಯಲ್ಲಿ ವಿವಿ ಪ್ಯಾಟ್ ಬಳಸದ ಬಗ್ಗೆ ಕೆಲ ಅಭ್ಯರ್ಥಿಗಳು ಆಗಸ್ಟ್ 31ರಂದೇ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೂ ಇದನ್ನು ಗಮನಕ್ಕೆ ತೆಗೆದುಕೊಳ್ಳದೇ ಚುನಾವಣೆ ನಡೆಸಲಾಗಿದೆ ಎಂದು ಎಂಇಎಸ್ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಸಮಸ್ಯೆ ಬಗೆಹರಿಯುವವರೆಗೂ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಮಾಡಿಸದಂತೆಯೂ ಮನವಿ ಮಾಡಿದ್ದಾರೆ. ಇಲ್ಲವಾದರೆ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಕಂಗಾಲಾಗಿರುವ ಎಂಇಎಸ್ ಪುಂಡರು ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ.

 

1 COMMENT

LEAVE A REPLY

Please enter your comment!
Please enter your name here