ಹುಚ್ಚನಿಗೆ ಹೆಚ್ಚು ತಿನ್ನಿಸಿದ್ರೆ ಆತನ ಹುಚ್ಚು ಬಿಡುವುದಿಲ್ಲ: ರಾಜ್ಯ ಸರ್ಕಾರಕ್ಕೆ ಟಾಂಗ್‌ ಕೊಟ್ಟ ಸಿ.ಟಿ.ರವಿ

Date:

ಹುಚ್ಚನಿಗೆ ಹೆಚ್ಚು ತಿನ್ನಿಸಿದ್ರೆ ಆತನ ಹುಚ್ಚು ಬಿಡುವುದಿಲ್ಲ: ರಾಜ್ಯ ಸರ್ಕಾರಕ್ಕೆ ಟಾಂಗ್‌ ಕೊಟ್ಟ ಸಿ.ಟಿ.ರವಿ

ಬೆಳಗಾವಿ: ಹುಚ್ಚನಿಗೆ ಹೆಚ್ಚು ತಿನ್ನಿಸಿದ್ರೆ ಆತನ ಹುಚ್ಚು ಬಿಡುವುದಿಲ್ಲ ಎಂದು ಎಂಎಲ್‌ಸಿ ಸಿ.ಟಿ.ರವಿ ರಾಜ್ಯ ಸರ್ಕಾರಕ್ಕೆ ಟಾಂಗ್‌ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರ ಮೇಲಿನ ಕೇಸ್ ವಾಪಸ್ ತೆಗೆಯುತ್ತೀರಿ. ಮುಸ್ಲಿಮರಿಗೆ ಬಜೆಟ್‌ನಲ್ಲಿ ಆದ್ಯತೆ ಕೊಡಲಾಗಿದೆ. ಇದೊಂದು ಕಮ್ಯುನಲ್ ಬಜೆಟ್ ಆಗಿದೆ. ಮುಲ್ಲಾ, ಮುಸ್ಲಿಂ ಗುರುಗಳ ಗೌರವ ಧನ ಹೆಚ್ಚಳ ಮಾಡಿದ್ದಾರೆ.
ಕೃಷ್ಣಾ ಮೇಲ್ದಂಡೆ, ತುಂಗಭದ್ರಾ ಯೋಜನೆಗೆ ಒಂದು ರೂಪಾಯಿ ಕೊಟ್ಟಿಲ್ಲ. ಕಳೆದ ವರ್ಷವೂ ಬಜೆಟ್‌ನಲ್ಲಿ ಹೇಳಿದ್ರು, ಆದ್ರೆ ಏನೂ ಮಾಡಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ಅನುದಾನ ಕೊಟ್ಟರೂ ಇವರು ಆರೋಪ ಮಾಡ್ತಿದ್ದಾರೆ. ಮೇಕೆದಾಟು ಯೋಜನೆ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪವಿಲ್ಲ. ಇದು ಕಾಂಗ್ರೆಸ್ ಪಕ್ಷದ ಬಜೆಟ್ ಅಲ್ಲ. ಹುಚ್ಚನಿಗೆ ಹೆಚ್ಚು ತಿನ್ನಿಸಿದ್ರೆ ಆತನ ಹುಚ್ಚು ಬಿಡುವುದಿಲ್ಲ ಎಂದು ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.
ಈ ಬಜೆಟ್‌ನಲ್ಲಿ ಕೆಲವರಿಗೆ ಖುಷಿಯಾಗಿದೆ. ಇದು ಕಾಂಗ್ರೆಸ್ ಬಜೆಟ್ ಅಥವಾ ಮುಸ್ಲಿಂ ಲೀಗ್ ಬಜೆಟ್. ಜಿನ್ನಾ ಆತ್ಮವೇ ಸಿದ್ದರಾಮಯ್ಯ ಅವರಿಗೆ ಪ್ರಚೋದನೆ ಕೊಟ್ಟಿರಬಹುದು. ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ, ವೋಟ್ ಬ್ಯಾಂಕ್‌ಗಾಗಿ ಮತೀಯ ಆಧಾರದ ಮೇಲೆ ಮೀಸಲಾತಿ ನೀಡಲಾಗಿದೆ. ಕಾಂಗ್ರೆಸ್‌ನ ಕೋಮುವಾದಿ ರಾಜಕಾರಣ ತೋರಿಸುತ್ತದೆ ಎಂದರು.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...