ಹುಟ್ಟುಹಬ್ಬದ ಸಂಭ್ರಮದಲ್ಲಿ ಆರಾಮ ಅರವಿಂದ ಸ್ವಾಮಿ !

Date:

ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ‌ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವ ನಟ ಅಂದ್ರೆ ಅದು ಅನೀಶ್ ತೇಜೇಶ್ವರ್. ಅವರಿಗಿಂದು ಜನ್ಮದಿನದ ಸಂಭ್ರಮ. ಅನೀಶ್ ಬರ್ತಡೇ ಸ್ಪೆಷಲ್ ಆಗಿ ಆರಾಮ್ ಅರವಿಂದ ಸ್ವಾಮಿ ಸಿನಿಮಾದ ಮೊದಲ ಹಾಡನ್ನು ವಿಂಕ್ ವಿಶಲ್ ಪ್ರೊಡಕ್ಷನ್ ಯೂಟ್ಯೂಬ್ ನಲ್ಲಿ ಅನಾವರಣ ಮಾಡಲಾಗಿದೆ.

ಆರಾಮ್ ಅರವಿಂದ ಸ್ವಾಮಿ ಟೈಟಲ್ ಟ್ರ್ಯಾಕ್ ಗೆ ನಾಗಾರ್ಜುನ್ ಶರ್ಮಾ ಪದಪುಂಜ ಪೊಣಿಸಿದ್ದು, ನಿಶಾನ್ ರೈ ಕಂಠ ಕುಣಿಸಿದ್ದಾರೆ. ಅರ್ಜುನ್ ಜನ್ಯ ಮ್ಯೂಸಿಕ್ ಹಾಡಿನ ಕಿಕ್ ಏರಿಸಿದೆ. ನಾಯಕನ ಗುಣವನ್ನು ವರ್ಣಿಸುವ ಈ ಟೈಟಲ್ ಟ್ರ್ಯಾಕ್ ಅನೀಶ್ ಜಬರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಬಾಬಾ ಭಾಸ್ಕರ್ ಮಾಸ್ಟರ್ ಕೊರಿಯೋಗ್ರಫಿಯಲ್ಲಿ ಈ ಸಿಂಗಿಂಗ್ ಮಸ್ತಿ ಮೂಡಿಬಂದಿದೆ.

ತನ್ನ ಪ್ರಮೋಷನ್ ಕಂಟೆಂಟ್ ನಿಂದಲೇ ಈಗಾಗಲೇ ಸದ್ದು ಮಾಡುತ್ತಿರುವ ’ಆರಾಮ ಅರವಿಂದ ಸ್ವಾಮಿ’ ಸಿನಿಮಾಗೆ ಅಭಿಷೇಕ್ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದಾರೆ. ನಮ್ ಗಣಿ ಬಿಕಾಂ ಪಾಸ್, ಗಜಾನನ ಅಂಡ್ ಗ್ಯಾಂಗ್ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಸಿನಿಮಾವಿದು. ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ’ಆರಾಮ ಅರವಿಂದ ಸ್ವಾಮಿ’ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದ್ದಾನೆ.

ಅನೀಶ್ ತೇಜೇಶ್ವರ್ ಗೆ ಜೋಡಿಯಾಗಿ ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ. ಅಕಿರ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವೈವಿಬಿ ಶಿವಸಾಗರ್ ಛಾಯಾಗ್ರಹಣ, ಉಮೇಶ್ ಆರ್ ಬಿ ಸಂಕಲನ ಚಿತ್ರಕ್ಕಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...