ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಯುವತಿಯ ಕೊಲೆ!

Date:

ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಸುಕಿನ ಜಾವ ನಸುನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಹತ್ಯೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ಅಂಜಲಿ ಅಂಬಿಗೇರ ಎಂದು ಗುರುತಿಸಲಾಗಿದೆ. ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಈ ಯುವತಿಯನ್ನು ಹತ್ಯೆ ಮಾಡಿದ್ದು, ನಂತರ ತಲೆಮರೆಸಿಕೊಂಡಿದ್ದಾನೆ.ನೇಹಾ ಮಾದರಿಯಲ್ಲಿ ಹತ್ಯೆ ಮಾಡುತ್ತೇನೆ ಎಂದು ಅಂಜಲಿ ಅಂಬಿಗೇರಗೆ ವಿಶ್ವ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಅದರಂತೆಯೇ ಬುಧವಾರ ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ವಿಶ್ವ ಧಮ್ಕಿ ಹಾಕಿದ್ದ. ಅಕಸ್ಮಾತ್ ನೀನು ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಆದ ಹಾಗೆಯೇ ನಿನಗೂ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದ.


ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ ಆರೋಪವೂ ಇದೆ. ಜತೆಗೆ, ಬೈಕ್ ಕಳ್ಳತನದಲ್ಲಿಯೂ ಆರೋಪಿಯಾಗಿದ್ದಾನೆ. ಆರೋಪಿ ವಿಶ್ವ ಅಂಜಲಿಗೆ ಧಮ್ಕಿ ಹಾಕಿರುವ ವಿಚಾರವಾಗಿ ಆಕೆಯ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಹೆಚ್ಚು ಪ್ರಾಶಸ್ತ್ಯ ನೀಡದ ಪೊಲೀಸರು, ಇದೆಲ್ಲ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರು. ಪರಿಣಾಮವಾಗಿ ಇದೀಗ ಮತ್ತೊಂದು ಕೊಲೆಯಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...