ಹುಬ್ಬಳ್ಳಿಯಲ್ಲಿ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು: ಸಾವಿನ ಸಂಖ್ಯೆ 8ಕ್ಕೆ ಏರಿಕೆ

Date:

ಹುಬ್ಬಳ್ಳಿಯಲ್ಲಿ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿಕೆ ಆಗಿದೆ. ಪ್ರಕಾಶ ಬಾರಕೇರ (42) ಮೃತ ಅಯ್ಯಪ್ಪ ಮಾಲಾಧಾರಿ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27) ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ಮಾಲಾಧಾರಿಗಳ ಸಾವಾಗಿದ್ದು, ಕಿಮ್ಸ್ನಲ್ಲಿ ಓರ್ವ ಗಾಯಾಳು ಮಾಲಾಧಾರಿಗೆ ಚಿಕಿತ್ಸೆ ಮುಂದುವರಿದಿದೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...