No menu items!
5.3 C
Munich
Wednesday, September 23, 2026

ಹುಬ್ಬಳ್ಳಿ: ರೈಲ್ವೆ ನಿಲ್ದಾಣದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ಪತ್ತೆ! ಆರೋಪಿಗಾಗಿ ಖಾಕಿ ಹುಡುಗಾಟ!

Must read

ಹುಬ್ಬಳ್ಳಿ:- ರೈಲ್ವೆ ನಿಲ್ದಾಣದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ಪತ್ತೆಯಾಗಿದ್ದು, ಖಾಕಿ ತನಿಖೆ ಕೈಗೊಂಡಿದೆ. ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ 4ನೇ ಪ್ಲಾಟ್​ಫಾರ್ಮ್​ನಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ.

ವಾರಸುದಾರರಿಲ್ಲದ ಬ್ಯಾಗ್​ವೊಂದರಲ್ಲಿ 4 ಕೆಜಿ ಗಾಂಜಾ ಪತ್ತೆಯಾಗಿದ್ದು, ಅಬಕಾರಿ ಉಪನಿರೀಕ್ಷಕ ಐ.ಡಿ.ಕಿತ್ತೂರು ಗಾಂಜಾ ಜಪ್ತಿ ಮಾಡಿದ್ದಾರೆ. ರೈಲಿನ ಮೂಲಕ ಹುಬ್ಬಳ್ಳಿಗೆ ಗಾಂಜಾ ತಂದಿರುವ ಶಂಕೆ ವ್ಯಕ್ತವಾಗಿದೆ. ಗಾಂಜಾ ತಂದಿದ್ದ ಅಪರಿಚಿತ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಘಟನೆ ಸಂಬಂಧ ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -spot_img

More articles

- Advertisement -spot_img

Latest article