ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು !

0
133

ಬೆಂಗಳೂರು: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಿ ಎಂದು ಕರೆ ನೀಡಿದರು.
ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದರು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದರು.