No menu items!
13.1 C
Munich
Monday, June 15, 2026

ಹೃದಯಾಘಾತದಿಂದ ಮೂರನೇ ಕ್ಲಾಸ್‌ ವಿದ್ಯಾರ್ಥಿನಿ ಸಾವು!

Must read

ಹೃದಯಾಘಾತದಿಂದ ಮೂರನೇ ಕ್ಲಾಸ್‌ ವಿದ್ಯಾರ್ಥಿನಿ ಸಾವು!

ಚಾಮರಾಜನಗರ: ಈಗೀಗ ಹೃದಯಾಘಾತ ಬಹಳ ಸಾಮಾನ್ಯ ಕಾಯಿಲೆಯಾಗಿಬಿಟ್ಟಿದೆ. 30 ವರ್ಷ ಮೇಲ್ಪಟ್ಟವರಿಗೂ ಈಗ ಹೃದಯಾಘಾತ ಕಾಣಿಸಿಕೊಳ್ಳುತ್ತಿದೆ. ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ.
ಮಧ್ಯವಯಸ್ಸಿನವರಲ್ಲಿ ಮಾತ್ರವಲ್ಲದೆ ಸಣ್ಣ ಮಕ್ಕಳಲ್ಲೂ ಈಗೀಗ ಹೃದಯಾಘಾತ ಉಂಟಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಇದೀಗ ಹೃದಯಾಘಾತದಿಂದ 3ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಈ ಘಟನೆ ನಡೆದಿದೆ. 8 ವರ್ಷದ ತೇಜಸ್ವಿನಿ ಮೃತ ವಿದ್ಯಾರ್ಥಿನಿ. ಚಾಮರಾಜನಗರದ ಬದನಕುಪ್ಪೆ ನಿವಾಸಿ ಲಿಂಗರಾಜು ಮತ್ತು ಶೃತಿ ದಂಪತಿಯ ಪುತ್ರಿ ತೇಜಸ್ವಿನಿ ಇಂದು ಶಿಕ್ಷಕಿಗೆ ನೋಟ್ಸ್ ತೋರಿಸುವ ವೇಳೆ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನ ಜೆಎಸ್ ಎಸ್ ಆಸ್ಪತ್ರೆಗೆ ಕರೆತರಲಾಗಿದ್ದು ಆದರೆ ಆಸ್ಪತ್ರೆಗೆ ಕರೆತರುವಷ್ಟರಲ್ಲೇ ತೇಜಸ್ವಿನಿ ಮೃತಪಟ್ಟಿದ್ದಾಳೆ. ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article