ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!
ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮುಜಾಮಿಲ್ (15) ಮೃತ ವಿದ್ಯಾರ್ಥಿ. ಆತ ಗೋಗುದ್ದು ಗ್ರಾಮದ ಚಮನ್ ಸಾಬ್ ಮತ್ತು ಫಾತೀಮಾ ದಂಪತಿಯ ಎರಡನೇ ಪುತ್ರ. ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.
ರಜೆ ಹಿನ್ನೆಲೆ ಮನೆಗೆ ಬಂದಿದ್ದ ವಿದ್ಯಾರ್ಥಿ, ಬೆಳಗಿನ ಜಾವ ಬಹಿರ್ದೆಸೆಗೆ ತೆರಳಿದ್ದ ವೇಳೆ ಹೃದಯಾಘಾತಕ್ಕೊಳಗಾದನು. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಮಾರ್ಗಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ.
ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.






