No menu items!
10.8 C
Munich
Wednesday, April 29, 2026

ಹೃದಯಾಘಾತ: ಜಿಮ್ ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ವ್ಯಕ್ತಿ ಸಾವು!

Must read

ಹೃದಯಾಘಾತ: ಜಿಮ್ ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ವ್ಯಕ್ತಿ ಸಾವು!

ಫರೀದಬಾದ್:- ಹರ್ಯಾಣದ ಫರೀದಾಬಾದ್​ನಲ್ಲಿ ಜಿಮ್ ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜರುಗಿದೆ. ಮೃತರನ್ನು ಪಂಕಜ್ ಶರ್ಮಾ ಎಂದು ಗುರುತಿಸಲಾಗಿದೆ.

ಬಲ್ಲಭಗಢದ ಜಿಮ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತಕ್ಕೊಳಗಾದಾಗ ಶರ್ಮಾ ಸುಮಾರು 170 ಕೆಜಿ ತೂಕವಿದ್ದರು. ಅವರು ತಮ್ಮ ಸ್ನೇಹಿತ ರೋಹಿತ್ ಜೊತೆ ಜಿಮ್‌ಗೆ ಹೋಗಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗಿದೆ. ಹಾಸನ ಜಿಲ್ಲೆಯೊಂದರಲ್ಲೇ 25ಕ್ಕೂ ಹೆಚ್ಚು ಮಂದಿ ಹೃದಯಾಘಾತದಿಂದ ಪ್ರಾಣಬಿಟ್ಟಿದ್ದಾರೆ.

- Advertisement -spot_img

More articles

- Advertisement -spot_img

Latest article