ಮಂಗಳವಾರದಂದು ಬೆಂಗಳೂರಿನ ಗಂಗೇನಹಳ್ಳಿಯ ತಮ್ಮ ನಿವಾಸದಿಂದ ಸ್ನೇಹಿತರನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
1989 ರಲ್ಲಿ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಉಮೇಶ್ ಭಟ್, ಎಸ್.ಎಂ. ಕೃಷ್ಣ ಸರ್ಕಾರದ ಅವಧಿಯಲ್ಲಿ ‘ನಮ್ಮ ಮೆಟ್ರೋ’ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.