No menu items!
16.5 C
Munich
Thursday, July 16, 2026

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ

Must read

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು: ಇರಾನ್–ಇಸ್ರೇಲ್ ನಡುವಿನ ಯುದ್ಧದ ಪರಿಣಾಮ ದೇಶದಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವ ಹಿನ್ನೆಲೆ, ಕಮರ್ಷಿಯಲ್ ಸಿಲಿಂಡರ್ಗಳ ಕೃತಕ ಅಭಾವ ಸೃಷ್ಟಿಸುವವರು ಹಾಗೂ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಅಂತರರಾಷ್ಟ್ರೀಯ ಉದ್ವಿಗ್ನತೆಯಿಂದ ದೇಶದಲ್ಲಿ ಅನಿಲ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಇದರ ಬೆನ್ನಲ್ಲೇ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಗ್ಯಾಸ್ ಗೋದಾಮುಗಳ ಮೇಲೆ ತಪಾಸಣೆ ತೀವ್ರಗೊಳಿಸಲಾಗಿದೆ. ಹೊಯ್ಸಳ ಸಿಬ್ಬಂದಿ ಪ್ರತಿಯೊಂದು ಗ್ಯಾಸ್ ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪಿಎಸ್ಐ ಮಟ್ಟದ ಅಧಿಕಾರಿಗಳು ಖುದ್ದು ತೆರಳಿ ನಗರದ ಗೋದಾಮುಗಳಲ್ಲಿ ಲಭ್ಯವಿರುವ ಸಿಲಿಂಡರ್ಗಳ ಸಂಖ್ಯೆ, ಬಂದಿರುವ ಆರ್ಡರ್ಗಳು ಹಾಗೂ ವಿತರಣೆ ಕುರಿತು ಸಮಗ್ರ ವರದಿ ಸಿದ್ಧಪಡಿಸುವಂತೆ ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
ಗೋದಾಮಿನಿಂದ ಗ್ರಾಹಕರಿಗೆ ಸಿಲಿಂಡರ್ ತಲುಪುವವರೆಗಿನ ಪ್ರಕ್ರಿಯೆಯ ಮೇಲೆ ಪೊಲೀಸರು ನಿರಂತರ ನಿಗಾ ವಹಿಸಿದ್ದಾರೆ. ನಿಗದಿಗಿಂತ ಹೆಚ್ಚಿನ ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಅಥವಾ ಕೃತಕ ಅಭಾವ ಸೃಷ್ಟಿಸಿದರೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇದೇ ವೇಳೆ ಗ್ಯಾಸ್ ಏಜೆನ್ಸಿಗಳು ಅಕ್ರಮವಾಗಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದರೆ ಅಥವಾ ಸಿಲಿಂಡರ್ ಇಲ್ಲವೆಂದು ಸುಳ್ಳು ಹೇಳುತ್ತಿದ್ದರೆ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.

- Advertisement -spot_img

More articles

- Advertisement -spot_img

Latest article