ಹೆಚ್.ಡಿ.ಕುಮಾರಸ್ವಾಮಿಗೆ 1,50,000 ಮತಗಳ ಮುನ್ನಡೆ.! ಸ್ಟಾರ್ ಚಂದ್ರು ಹಿನ್ನಡೆ

Date:

ಮಂಡ್ಯ: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನೇನೂ ಕೆಲವೇ ಗಂಟೆಗಳು ಬಾಕಿ ಇದೆ. ಒಕ್ಕಲಿಗ ಮತಗಳ ಪ್ರಾಬಲ್ಯವಿರುವ ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಮಂಡ್ಯ ಕೂಡ ಒಂದು. ಮಾಜಿ ಮುಖ್ಯಮಂತ್ರಿಯೊಬ್ಬರ ಸ್ಪರ್ಧೆಯಿಂದ ಕ್ಷೇತ್ರವು ರಾಜ್ಯದ ಗಮನ ಸೆಳೆದಿತ್ತು. ಸದ್ಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ನಿರೀಕ್ಷೆಯಂತೆ 1,50,000 ಮತಗಳ ಮುನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು- 1,43,694 ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಕ್ಷಣ ಕ್ಷಣದ ಫಲಿತಾಂಶ ಹೊರಬೀಳುತ್ತಿದ್ದು, ಎಲ್ಲರ ಚಿತ್ರ ಈ ಕ್ಷೇತ್ರದತ್ತ ನೆಟ್ಟಿದೆ. ಮೊದಲ ಬಾರಿ ಲೋಕಸಭಾ ಚುನಾವಣಾ ಕಣಕ್ಕಿಳಿದಿರುವ ಕೈ ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಿಗರಲ್ಲಿ ಈಗಿನ ಫಲಿತಾಂಶವು ತುಸು ಬೇಸರ ತರಿಸಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...