ಮೈಸೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ. ಎಚ್.ಡಿ ರೇವಣ್ಣ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದೆ. ಹೀಗಾಗಿ ಇದೀಗ ರೇವಣ್ಣ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಸಂತ್ರಸ್ತೆ ಪುತ್ರ ರೇವಣ್ಣ ಹಾಗೂ ಸತೀಶ್ ಬಾಬಣ್ಣ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಭವಾನಿ ಅಕ್ಕ ಕರೆಯುತ್ತಿದ್ದಾರೆ ಅಂತ ಬಾಬಣ್ಣ ಎಂಬಾತ ಮನೆಗೆ ಬಂದು ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ನನ್ನ ತಾಯಿ ನಾಪತ್ತೆಯಾಗಿದ್ದಾರೆ . ಪೊಲೀಸರು ಕೇಳಿದರೆ ನಮಗೇನು ಗೊತ್ತಿಲ್ಲ ಎಂದು ಹೇಳಿದ್ರು. ಬಳಿಕ ಪೊಲೀಸರ ಮೇಲೆಯೂ ಒತ್ತಡ ಹಾಕಿದ್ರು ಅಂತ ದೂರಿನಲ್ಲಿ ತಿಳಿಸಿದ್ದಾರೆ.
ಹೆಚ್.ಡಿ.ರೇವಣ್ಣಗೆ ಮತ್ತೊಂದು ಸಂಕಷ್ಟ: ಮಾಜಿ ಸಚಿವರ ವಿರುದ್ಧ ಕಿಡ್ನಾಪ್ ಕೇಸ್
Date:






