ಹೆಣ್ಣು ಮಕ್ಕಳೇ ಹುಷಾರ್: ಬೆಂಗಳೂರಲ್ಲಿ ನಿಮಗಿಲ್ಲ ರಕ್ಷಣೆ; ಈ ಸ್ಟೋರಿ ಮಿಸ್ ಮಾಡ್ದೆ ನೋಡಿ!

Date:

 

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರು ಒಂಟಿಯಾಗಿ ಓಡಾಡೋಕು ಭಯಪಡುವಂತೆ ವಾತಾವರಣ ನಿರ್ಮಾಣವಾಗಿದೆ. ಹೌದು ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ.
ಇದೀಗ ಅಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.
ಶುಕ್ರವಾರ ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ. ವಿಡಿಯೊ ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...