ಹೈಕಮಾಂಡ್ ಇದುವರೆಗೆ ಯಾರಿಗೂ ಕ್ಷೇತ್ರಗಳ ಜವಾಬ್ದಾರಿಯನ್ನು ವಹಿಸಿಕೊಟ್ಟಿಲ್ಲ !

1 Min Read

ಚಿಕ್ಕೋಡಿ: ಪಕ್ಷದ ಹೈಕಮಾಂಡ್ ಇದುವರೆಗೆ ಯಾರಿಗೂ ಕ್ಷೇತ್ರಗಳ ಜವಾಬ್ದಾರಿಯನ್ನು ವಹಿಸಿಕೊಟ್ಟಿಲ್ಲ ಎಂದು ಲಕ್ಷ್ಮಣ ಸವದಿ ಹೇಳಿದರು. ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ಇನ್ನೂ ಚುನಾವಣಾ ಪ್ರಚಾರ ಆರಂಭವಾಗಿಲ್ಲ, ಈಗಷ್ಟೇ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ, ನಾಮಪತ್ರಗಳ ಸಲ್ಲಿಕೆಯಾದ ಬಳಿಕ ಚುನಾವಣಾ ಸಮಿತಿಗಳನ್ನು ರಚಿಸಿ ಪ್ರಚಾರ ಆರಂಭಿಸಲಾಗುತ್ತದೆ. ಪಕ್ಷದ ಹೈಕಮಾಂಡ್ ಇದುವರೆಗೆ ಯಾರಿಗೂ ಕ್ಷೇತ್ರಗಳ ಜವಾಬ್ದಾರಿಯನ್ನು ವಹಿಸಿಕೊಟ್ಟಿಲ್ಲ,

ಅಭ್ಯರ್ಥಿಗಳ ಆಯ್ಕೆಗಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಮೀಕ್ಷೆಗಳನ್ನು ನೀಡುವ ಕೆಲಸವಹಿಸಿಕೊಡಲಾಗಿತ್ತು, ಪ್ರಚಾರ ಕಾರ್ಯದಲ್ಲಿ ಯಾರನ್ನು ಕಡೆಗಣಿಸಿದ್ದಾರೆ ಯಾರನ್ನು ಪರಾಂಬರಿಸಿದ್ದಾರೆ ಅಂತ ಪ್ರಶ್ನೆ ಉದ್ಭವಿಸಲ್ಲ ಎಂದು ಸವದಿ ಹೇಳಿದರು. ಚುನಾವಣೆಯ ಸಂದರ್ಭದಲ್ಲಿ ಜವಾಬ್ದಾರಿ ನೀಡಿದರೆ ಮಾತ್ರ ಕೆಲಸ ಮಾಡಬೇಕು ಅಂತಿರಲ್ಲ, ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕಾಗುತ್ತದೆ ಎಂದು ಲಕ್ಷ್ಮಣ ಸವದಿ ಹೇಳಿದರು.

Share This Article