ನವದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು, ಎಂ.ಬಿ.ಪಾಟೀಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಬೇಕೆಂದು ತೀವ್ರ ಲಾಬಿ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಡಿ.ಕೆ.ಶಿವಕುಮಾರ್ ಅವರು ಎಲ್ಲಿಯೂ ಹೋಗದೆ ಬೆಂಗಳೂರಿನಲ್ಲಿಯೇ ಉಳಿದುಕೊಂಡಿರುವ ಬಗ್ಗೆ ಪ್ರಶ್ನೆ ಕೇಳಿದಾಗ ಮೇಲಿನಂತೆ ಪ್ರತಿಕ್ರಿಯಿಸಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಕಳೆದೆರಡು ದಿನಗಳಿಂದ ನವದೆಹಲಿಯಲ್ಲಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು, ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ಗೊತ್ತಿಲ್ಲ. ನಾನಂತೂ ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ರಾಜಕಾರಣ ಮಾಡಿಕೊಳ್ಳೂವವರು ಮಾಡಿಕೊಳ್ಳಲಿ ಎಂದು ಹೇಳಿದರು.