ಪಂಚಮಸಾಲಿ ಮೀಸಲಾತಿ ಹೋರಾಟಗಾರರು, ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಬಲ ಪ್ರಯೋಗ ಮಾಡಬೇಕಾದ ಅನಿವಾರ್ಯತೆ ಬಂತು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ, ಲಾಠಿ ಚಾರ್ಜ್ ಮಾಡುವ ಅನಿವಾರ್ಯತೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಏಕಾಏಕಿ ದೊಡ್ಡ ಸಂಖ್ಯೆಯಲ್ಲಿ ಬಂದ ಪ್ರತಿಭಟನಾಕಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಂದಾಗ ಅವರನ್ನು ತಡೆಯುವ ಪ್ರಯತ್ನ ಮಾಡಲಾಯಿತು ಎಂದು ಎ ಡಿ ಜಿ ಪಿ ಹಿತೆಂದ್ರ ಹೇಳಿದ್ದಾರೆ.
ಗಲಭೆಯಲ್ಲಿ 14 ಪೊಲೀಸರಿಗೆ ಗಾಯಗಳಾಗಿದ್ದು, 11 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 80 ಜನರನ್ನು ವಶಕ್ಕೆ ಪಡೆಯಲಾಗಿದ್ದು, ದೂರು ಧಾಖಲು ಮಾಡಲಾಗುತ್ತಿದೆ.