No menu items!
3.9 C
Munich
Wednesday, September 23, 2026

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ! ನಾಲ್ವರು ಅರೆಸ್ಟ್‌

Must read

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ! ನಾಲ್ವರು ಅರೆಸ್ಟ್‌

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಹೈ ಪ್ರೊಫೈಲ್ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರೋ ಆಘಾತಕಾರಿ ವಿಚಾರ ಇದೀಗ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 9 ಮಹಿಳೆಯರ ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬಿಇಎಲ್ ಬಡಾವಣೆಯಲ್ಲಿ ಹೈಫೈ ಮನೆ ಬಾಡಿಗೆ ಪಡೆದಿದ್ದ ಆರೋಪಿಗಳು, ಹೊರ ರಾಜ್ಯದಿಂದ ಕೆಲಸಕ್ಕೆ ಬರುವ ಯುವತಿಯರನ್ನೇ ಗುರಿಯಾಗಿಸಿಕೊಂಡಿದ್ದರು. ಅವರಿಗೆ ಕೆಲಸದ ಆಸೆ ತೋರಿಸಿ ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದರು ಎಂಬುದು ತಿಳಿದುಬಂದಿದೆ.
ಮನೆ ಮಾಲೀಕರ ಬಳಿ ಮಹಿಳೆಗೆ ಪತಿ ಇಲ್ಲ ಎಂದು ಹೇಳಿ ಬಾಡಿಗೆಗೆ ಪಡೆಯುತ್ತಿದ್ದರು. ನಂತರ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಗಿರಾಕಿಗಳನ್ನು ಫೋನ್ ಮೂಲಕ ಸಂಪರ್ಕಿಸುತ್ತಿದ್ದ ಆರೋಪಿಗಳು, ಅವರನ್ನು ಮನೆಗೆ ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article