ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ
ಹೈದರಾಬಾದ್: ಮದೀನಾದಿಂದ ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ, ವಿಮಾನವನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. 6E58 ಸಂಖ್ಯೆಯ ವಿಮಾನದಲ್ಲಿ 180 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಗಳು ಇದ್ದರು.
ಮಧ್ಯಾಹ್ನ ಸುಮಾರು 12:30 ಗಂಟೆಗೆ ವಿಮಾನವು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ವಿಮಾನ ಗಗನಯಾನದಲ್ಲಿದ್ದಾಗಲೇ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು,
ಮುನ್ನೆಚ್ಚರಿಕಾ ಕ್ರಮವಾಗಿ ಸಮೀಪದ ಸುರಕ್ಷಿತ ವಿಮಾನ ನಿಲ್ದಾಣವಾದ ಅಹಮದಾಬಾದ್‌ನಲ್ಲಿ ಭೂಸ್ಪರ್ಶ ಮಾಡಲು ಸೂಚಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಭೂಸ್ಪರ್ಶದ ಬಳಿಕ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಕರೆದೊಯ್ಯಲಾಗಿದ್ದು, ಬಾಂಬ್ ಪತ್ತೆ ದಳ ಹಾಗೂ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಯಾಣಿಕರೆಲ್ಲ ಸುರಕ್ಷಿತರಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.






