ಹೈದರಾಬಾದ್ ತಂಡದ ಈ ಬೌಲರ್ ಮುಂದೆ ವಿರಾಟ್ ಕೊಹ್ಲಿ ಆಟ ಕಷ್ಟ!

Date:

ಕ್ರಿಕೆಟ್ ಜಗತ್ತಿನಲ್ಲಿ ಪ್ರಸ್ತುತ ಬೆಸ್ಟ್ ಬ್ಯಾಟ್ಸ್‌ಮನ್‌ ಎಂದರೆ ವಿರಾಟ್ ಕೊಹ್ಲಿ. ಈ ಹಿಂದೆ ನಿರ್ಮಿಸಲಾಗಿದ್ದ ಹಲವಾರು ದಾಖಲೆಗಳನ್ನು ಸರಿಗಟ್ಟಿ ತನ್ನದೇ ಆದ ಹಲವಾರು ಹೊಸ ದಾಖಲೆಗಳನ್ನು ಮತ್ತು ಮೈಲಿಗಲ್ಲುಗಳನ್ನು ನಿರ್ಮಿಸಿರುವ ವಿರಾಟ್ ಕೊಹ್ಲಿ ಅವರು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿಯೂ ಕೂಡ ಕಿಂಗ್. ಅತಿ ಹೆಚ್ಚು ರನ್ ಬಾರಿಸಿರುವ ಐಪಿಎಲ್ ಆಟಗಾರರ ಪಟ್ಟಿಯಲ್ಲಿಯೂ ಸಹ ವಿರಾಟ್ ಕೊಹ್ಲಿ ಅಗ್ರಸ್ಥಾನ ಆಕ್ರಮಿಸಿಕೊಂಡಿದ್ದಾರೆ.

ಇಂಡಿಯನ್ ಪ್ರಿಮಿಯರ್ ಲೀಗ್‌ನಲ್ಲಿ ಅಪಾರ ಅನುಭವವನ್ನು ಹೊಂದಿರುವ ವಿರಾಟ್ ಕೊಹ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಈ ಬೌಲರ್‌ನ ಎಸೆತಕ್ಕೆ ಲೀಲಾಜಾಲವಾಗಿ ಬ್ಯಾಟ್ ಮಾಡಲಾಗದೆ ಚಡಪಡಿಸಿದ ಉದಾಹರಣೆಗಳಿವೆ. ಯಾವುದೇ ಬೌಲರ್ ಇರಲಿ ತನ್ನದೇ ಆದ ಶೈಲಿಯಲ್ಲಿ ಬೌಂಡರಿಗಳನ್ನು ಚಚ್ಚುವ ವಿರಾಟ್ ಕೊಹ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಸಂದೀಪ್ ಶರ್ಮಾ ಬೌಲಿಂಗ್‌ನಲ್ಲಿ ಮಾತ್ರ ಕೊಂಚ ಮಂಕಾಗುತ್ತಾರೆ ಎಂದು ಈ ಅಂಕಿ ಅಂಶಗಳೇ ಹೇಳುತ್ತಿವೆ.

 

 

ವಿರಾಟ್ ಕೊಹ್ಲಿ ಅವರು ಇದುವರೆಗೂ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಂದೀಪ್ ಶರ್ಮಾ ಅವರ 55 ಎಸೆತಗಳನ್ನು ಎದುರಿಸಿ ಗಳಿಸಿರುವುದು 73 ರನ್ ಮಾತ್ರ & ವಿಕೆಟ್ ಒಪ್ಪಿಸಿರುವುದು 7 ಬಾರಿ. ಹೌದು ಸಂದೀಪ್ ಶರ್ಮಾ ಬೌಲಿಂಗ್‌ನಲ್ಲಿ ವಿರಾಟ್ ಕೊಹ್ಲಿ ಇದುವರೆಗೂ 7 ಬಾರಿ ಔಟ್ ಆಗಿ ಪೆವಿಲಿಯನ್ ಕಡೆ ಪಯಣ ಬೆಳೆಸಿದ್ದಾರೆ. ಬುಧವಾರ ( ಏಪ್ರಿಲ್ 14 ) ನಡೆಯಲಿರುವ ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಪಂದ್ಯದಲ್ಲಿ ಸಂದೀಪ್ ಶರ್ಮಾ ಅವರ ಬೌಲಿಂಗ್‌ನ್ನು ವಿರಾಟ್ ಹೇಗೆ ಎದುರಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

 

ಇದುವರೆಗೂ 93 ಐಪಿಎಲ್ ಪಂದ್ಯಗಳನ್ನಾಡಿರುವ ಸಂದೀಪ್ ಶರ್ಮಾ 109 ವಿಕೆಟ್ ಪಡೆದುಕೊಂಡಿದ್ದಾರೆ. 4 ಓವರ್‌ಗಳಲ್ಲಿ 20 ರನ್ ನೀಡಿ 4 ವಿಕೆಟ್‍ಗಳನ್ನು ಪಡೆದುಕೊಂಡಿರುವುದು ಸಂದೀಪ್ ಶರ್ಮಾರ ಅತ್ಯುತ್ತಮ ಪ್ರದರ್ಶನವಾಗಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...