ಹೌದು ಆಂಧ್ರಪ್ರದೇಶದಲ್ಲಿ ಇನ್ನು ಮುಂದೆ ಮಹಿಳೆಯರ ವಿರುದ್ಧದ ದೌರ್ಜನ್ಯ ಮತ್ತು ಅತ್ಯಾಚಾರದಂತಹ ಪ್ರಕರಣಗಳು ನೆಡೆದರೆ ವಿಚಾರಣೆಯನ್ನು 14 ದಿನದಲ್ಲಿ ಪೂರ್ಣಗೊಳಿಸಿ 21 ದಿನದೊಳಗೆ ಶಿಕ್ಷೆ ನೀಡಲಾಗುತ್ತದೆ ಇದಕ್ಕೆ ದಿಶಾ ಮಸೂದೆ ಎಂದು ಹೆಸರಿಟ್ಟು ಈ ಮಸೂದೆಯನ್ನು ಜಾರಿಗೆ ತಂದಿದೆ .

ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಸಂಪುಟ ಸಭೆಯಲ್ಲಿ ಕಾಯ್ದೆಗೆ ಅನುಮೋದನೆ ನೀಡಲಾಗಿದ್ದು, ಮಹಿಳೆಯರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವುದು ದಿಶಾ ಕಾಯ್ದೆಯ ಉದ್ದೇಶವಾಗಿದೆ. ಮಹಿಳೆಯರ ವಿರುದ್ಧ ದೌರ್ಜನ್ಯ ದಬ್ಬಾಳಿಕೆ ನಡೆಸುವ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆರೋಪಿಯನ್ನು 21 ದಿನಗಳಲ್ಲಿ ಗಲ್ಲಿಗೇರಿಸಲಾಗುತ್ತದೆ ಎಂದು ಆಂಧ್ರ ಪ್ರದೇಶ ಸರ್ಕಾರದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ .






