ಹೊರಗುತ್ತಿ ನೇಮಕಾತಿ ಮೀಸಲಾತಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಆದೇಶ

Date:

ಬೆಂಗಳೂರು: ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವಂತೆ ಸೂಚಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ – ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಡಿ. 21, 2023 ರಂದು ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿ ಜಾರಿಗೊಳಿಸಲು ನಿರ್ಣಯಿಸಲಾಗಿತ್ತು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಷರತ್ತುಗಳೇನು?:
• ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ
• ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಯನ್ನು ಪಡೆಯಲು ಷರತ್ತುಗಳನ್ನು ನಮೂದಿಸಬೇಕು
• ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇ.33 ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಬೇಕು
• ಟೆಂಡರ್ ಅಂಗೀಕರಿಸುವ ಪ್ರಾಧಿಕಾರ ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಯ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ, ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)
• ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ/ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳಬೇಕು
• ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸಬೇಕು
• ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರಬೇಕು
• ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸುವಂತಿಲ್ಲ

Previous article
Next article
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ಹಾಗೂ ಲೈಂಗಿಕ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ ಹೀಗಾಗಲೇ ಜಾಮೀನು ಮಂಜೂರು ಆಗಿದ್ರೂ ರೇವಣ್ಣಗೆ ಚಿಂತೆ ಮಾತ್ರ ತಪ್ಪಿಲ್ಲ. ಎರಡು ಕೇಸ್ ನಲ್ಲಿ ರಿಲೀಫ್ ಸಿಗ್ತಿದ್ದಂತೆ ಹೆಚ್ ಡಿ ರೇವಣ್ಣಗೆ ಮತ್ತೊಂದ್ಕಡೆ ಟೆನ್ಷನ್ ಶುರುವಾಗಿದೆ. ಹೈಕೋರ್ಟ್ ನಲ್ಲಿ ಏನು ಬೆಳವಣಿಗೆಯಾಗುತ್ತೋ ಎಂಬ ಟೆಂಕ್ಷನ್ ಕಾಡತೊಡಗಿದೆ. ಸದ್ಯ ಅರ್ಜಿ ವಿಚಾರಣೆಯ ದಿನಾಂಕ ನಿಗದಿಯಾಗಬೇಕಿದೆ..ರೇವಣ್ಣ ಪರ ಹಿರಿಯ ವಕೀಲ ಸಿವಿ ನಾಗೇಶ್ ವಕಾಲತ್ತು ವಹಿಸಿದ್ದಾರೆ. ಈ ನಡುವೆ ಪ್ರಬಲ ಸ್ಪರ್ಧಿಯಾಗಿ ಹಿರಿಯ ವಕೀಲ ರವಿವರ್ಮಕುಮಾರ್ ಎಸ್ ಪಿಪಿಯಾಗಿ ನೇಮಕ ಮಾಡಲಾಗಿದೆ. ಒಂದ್ಕಡೆ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳುವ ಬೆನ್ನಲ್ಲೇ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣ ವಿಚಾರಣೆ ಮಾಡಲು ಎಸ್ ಐಟಿ ತಯಾರಿ ನಡೆಸಿದೆ. ಇನ್ನೆರಡ್ಮೂರು ದಿನದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣ ವಿಚಾರಣೆ ಸಾಧ್ಯತೆ ಇದ್ದು, ಸಂತ್ರಸ್ಥೆ ಹೇಳಿಕೆ ದಾಖಲಿಸಿರೋ ಬಗ್ಗೆ ತೀವ್ರ ವಿಚಾರಣೆ ನಡೆಸಲು ಎಸ್ ಐಟಿ ಸಸಜ್ಜಾಗಿದೆ. ಇದೇ ವೇಳೆ ಮಗ ನಾಪತ್ತೆ ಬಗ್ಗೆಯೂ ವಿಚಾರಣೆ ನಡೆಸೋ ಸಾಧ್ಯತೆ ಇದೆ. ಇನ್ನು ಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣ ಸರಿಯಾಗಿ ಬಾಯ್ಬಿಟ್ಟಿಲ್ಲ. ಎಸ್ ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಅಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಹೀಗಾಗಿ ಕಿಡ್ನಾಪ್ ಪ್ರಕರಣದಲ್ಲಿ ವಿಚಾರಣೆ ಮಡೋದೆ ಎಸ್ ಐಟಿಗೆ ಚಾಲೆಂಜ್ ಆಗಿದೆ. ಒಟ್ನಲ್ಲಿ ಸಂತ್ರಸ್ಥೆ ಮಹಿಳೆ ಹೇಳಿಕೆ ಹಾಗೂ ಟೆಕ್ನಿಕಲ್ ಎವಿಡೆನ್ಸ್ ಮೇಲೆ ವಿಚಾರಣೆ ಮಾಡಲು ಎಸ್ ಐಟಿ ತಯಾರಿ ನಡೆಸಿದೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...