ಹೊಸಕೋಟೆ ಕ್ಷೇತ್ರದಲ್ಲಿ ಉಪ ಚುನಾವಣೆ ಕಣ ರಂಗೇರಿತ್ತು ಎಂಟಿಬಿ ನಾಗರಾಜ್ ಹಾಗೂ ಶರತ್ ಬಚ್ಚೇಗೌಡ ಅವರ ಪೈಪೋಟಿ ಹೊಸಕೋಟೆ ಕ್ಷೇತ್ರದಲ್ಲಿ ಉಪ ಚುನಾವಣೆಯ ಅಖಾಡದಲ್ಲಿ ದ್ದು ಇದೀಗ ಎಂಟಿಬಿ ನಾಗರಾಜ್ ಅವರು ಸೋಲಿನ ಭೀತಿಯಲ್ಲಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರ್ತಾ ಇದೆ ಸಂಸದ ಬಚ್ಚೇಗೌಡ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸದೆ ತಮ್ಮ ಪುತ್ರ ಶರತ್‌ಗೆ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ವ್ಯತಿರಿಕ್ತ ಫಲಿತಾಂಶ ಬರುವ ಸಾಧ್ಯತೆಗಳಿವೆ ಎಂದು ಎಂಟಿಬಿ ನಾಗರಾಜ್, ಯಡಿಯೂರಪ್ಪರ ಮುಂದೆ ತಮ್ಮ ಆಳಲನ್ನು ತೋಡಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.
ಕ್ಷೇತ್ರದ ಉಸ್ತುವಾರಿಗಳು ನೀವು ನಿಶ್ಚಿತವಾಗಿಯೂ ಗೆಲ್ಲಲಿದ್ದೀರಿ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ನೀವು ಆತಂಕಪಡುವ ಅಗತ್ಯವಿಲ್ಲ ತನ್ನ ಎಂದು ಎಂಟಿಬಿ ನಾಗರಾಜ್ ಅವರಿಗೆ ಯಡಿಯೂರಪ್ಪ ಅವರು ಸಾಂತ್ವನ ಹೇಳಿ ಕಳಿಸಿದ್ದಾರೆ .