ಇಂದು ಸಬ್ ಇನ್‌ಸ್ಪೆಕ್ಟರ್ ವಿರುದ್ಧ ದೂರು ನೀಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನೆಡೆದಿದ್ದು,
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಅಪರ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದು ರಾಜು ಮತ್ತು ಸಿಬ್ಬಂದಿಯ ವಿರುದ್ಧ ಆರೋಪ ಮಾಡಿದ್ದಾರೆ ಕೃಷ್ಣಪ್ಪ ಮೇಲೆ ದೌರ್ಜನ್ಯ ಮತ್ತು ದಬ್ಬಾಳಿಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ನ್ಯಾಯಾಲಯದಲ್ಲಿರುವ ಜಮೀನಿನ ವಿಚಾರದಲ್ಲಿ ರಾಜು ಮಧ್ಯಪ್ರವೇಶ ಮಾಡಿ ಠಾಣೆಗೆ ಕರೆಸಿ ಜಮೀನು ಬಿಟ್ಟುಕೊಡುವಂತೆ ಬೆದರಿಕೆ ಹಾಕಿದ್ದಾರೆ ಹಾಗು ಖುದ್ದು ತಾವೇ ನಿಂತು ಜಮೀನಿಗೆ ಕಾಂಪೌಡ್ ಹಾಕಿಸಿದ ಸಬ್ ಇನ್‌ಸ್ಪೆಕ್ಟರ್ ಎಂದು ಇದರಿಂದ ಮನನೊಂದು ಮನೆಬಿಟ್ಟು ಕೃಷ್ಣಪ್ಪ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ಮುನಿರಂಜನ್ ಅವರು ಇನ್‌ಸ್ಪೆಕ್ಟರ್ ವಿರುದ್ಧ ದೂರು ನೀಡಿದ್ದು ಹಾಗು ತಂದೆಯನ್ನು ಹುಡುಕಿಕೊಡಿ ಎಂದು ಮನವಿ ಮಾಡಿದ್ದಾರೆ.